ಪೃಥ್ವಿ ಶಾ- ವಾರ್ನರ್ ಫಿಫ್ಟಿ: ಕೆಕೆಆರ್ ಗೆ ಡೆಲ್ಲಿ 216 ರನ್ ಗುರಿ

ಭಾನುವಾರ, 10 ಏಪ್ರಿಲ್ 2022 (17:35 IST)

ಆರಂಭಿಕರಾದ ಪೃಥ್ವಿ ಶಾ ಮತ್ತು ಡೇವಿಡ್ ವಾರ್ನರ್ ಅವರ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ 216 ರನ್ ಗಳ ಕಠಿಣ ಗುರಿ ಒಡ್ಡಿದೆ.

ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 215 ರನ್ ಗಳಿಸಿದೆ.

ರನ್ ಬರ ಎದುರಿಸುತ್ತಿದ್ದ ವಾರ್ನರ್ ಪ್ರಸಕ್ತ ಸಾಲಿನ ಮೊದಲ ಅರ್ಧಶತಕ ಗಳಿಸಿದರು. ಈ ಮೂಲಕ ಮೊದಲ ವಿಕೆಟ್ ಗೆ ಪೃಥ್ವಿ ಶಾ ಜೊತೆ 93 ರನ್ ಜೊತೆಯಾಟ ನಿಭಾಯಿಸಿ ಭದ್ರ ಬುನಾದಿ ಹಾಕಿಕೊಟ್ಟರು.

ವಾರ್ನರ್ 45 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 61 ರನ್ ಬಾರಿಸಿ ಉಮೇಶ್ ಯಾದವ್ ಗೆ ವಿಕೆಟ್ ಒಪ್ಪಿಸಿದರೆ, ಪೃಥ್ವಿ ಶಾ 29 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 51 ರನ್ ಗಳಿಸಿದ್ದಾಗ ವರುಣ್ ಚಕ್ರವರ್ತಿ ಎಸೆತದಲ್ಲಿ ಬೌಲ್ಡ್ ಆದರು. ನಾಯಕ ಪೃಥ್ವಿ ಶಾ 14 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 27 ರನ್ ಗಳಿಸಿ ಔಟಾದರು.

6ನೇ ವಿಕೆಟ್ ಗೆ ಜೊತೆಯಾದ ಅಕ್ಸರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ 20 ಎಸೆತದಲ್ಲಿ 50 ರನ್ ಜೊತೆಯಾಟ ನಿಭಾಯಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಅಕ್ಸರ್ ಪಟೇಲ್ 14 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ 22 ರನ್ ಬಾರಿಸಿ ಔಟಾಗದೇ ಉಳಿದರೆ, ಶಾರ್ದೂಲ್ ಠಾಕೂರ್ 11 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 29 ರನ್ ಸಿಡಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ