ನೂರನೇ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಶನಿವಾರ, 16 ಏಪ್ರಿಲ್ 2022 (18:06 IST)
ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಶತಕ ಸಿಡಿಸಿದ್ದಾರೆ.

ಈ ಪಂದ್ಯ ಅವರ ಪಾಲಿಗೆ ನೂರನೇ ಪಂದ್ಯವಾಗಿತ್ತು. ಮುಂಬೈ ಇಂಡಿಯನ್ಸ್ ಈ ವಿರುದ್ಧ ಅವರು ಈ ಮೊದಲೂ ಶತಕ ಸಿಡಿಸಿದ್ದರು. ಈ ಮೂಲಕ ಒಂದೇ ತಂಡದ ವಿರುದ್ಧ ಎರಡು ಶತಕ ಸಿಡಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡರು.

ಈ ಪಂದ್ಯದಲ್ಲಿ ಅವರು 60 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 9 ಬೌಂಡರಿಗಳನ್ನೊಳಗೊಂಡ ಭರ್ಜರಿ 103 ರನ್ ಗಳಿಸಿದರು. ಇದರೊಂದಿಗೆ ಲಕ್ನೋ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ