ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ: ಸತತ ಮೂರನೇ ಗೆಲುವಿನ ಛಲದಲ್ಲಿ ಶ್ರೇಯಸ್ ಪಡೆ
ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಎರಡು ಸೋಲಿನೊಂದಿಗೆ ಎರಡು ಅಂಕ ಮಾತ್ರ ಗಳಿಸಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ಈ ಪಂದ್ಯದಿಂದ ರಾಜಸ್ಥಾನ ತಂಡದ ನಾಯಕತ್ವದ ಜವಾಬ್ದಾರಿ ವಹಿಸುತ್ತಿದ್ದಾರೆ. ಆ ಮೂಲಕ ತಂಡವು ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದೆ. ಈ ಹಿಂದಿನ ಪಂದ್ಯದಲ್ಲಿ ರಿಯಾನ್ ಪರಾಗಿ ತಂಡವನ್ನು ಮುನ್ನಡೆಸಿದ್ದರು.