ಐಪಿಎಲ್ 2022: ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿರುವ ಡೆಲ್ಲಿ

ಬುಧವಾರ, 11 ಮೇ 2022 (08:40 IST)
ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.

ಎರಡೂ ತಂಡಕ್ಕೆ ಪ್ಲೇ ಆಫ್ ಹಂತದ ದೃಷ್ಟಿಯಿಂದ ಗೆಲುವು ಅನಿವಾರ್ಯವಾಗಿದೆ. ರಾಜಸ್ಥಾನ್ ರಾಯಲ್ಸ್ ಕಳೆದ ಎರಡು ಪಂದ್ಯಗಳಿಂದ ಸತತವಾಗಿ ಸೋತಿದ್ದು, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ಪ್ರಬಲ ಲಕ್ನೋ ವಿರುದ್ಧ ಸೋಲು ಅನುಭವಿಸಿತ್ತು. ಇದರಿಂದಾಗಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಜಾರಿದ್ದು, ಈಗ ಗೆಲುವಿನ ಅನಿವಾರ್ಯತೆಯಲ್ಲಿದೆ.  ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ