ಐಪಿಎಲ್ 2022: ಆರ್ ಸಿಬಿ ವಿರುದ್ಧ ಗೆದ್ದ ಗುಜರಾತ್
ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಪರ ವಿರಾಟ್ ಕೊಹ್ಲಿ 58 ರನ್ ಗಳಿಸಿ ಮಿಂಚಿದರು. ಇವರಿಗೆ ತಕ್ಕ ಸಾಥ್ ನೀಡಿದ ರಜತ್ ಪಟಿದಾರ್ 52, ಗ್ಲೆನ್ ಮ್ಯಾಕ್ಸ್ ವೆಲ್ 33 ರನ್ ಗಳಿಸಿ ಔಟಾದರು. ಇದರಿಂದಾಗಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು.
ಈ ಮೊತ್ತ ಬೆನ್ನತ್ತಿದ ಗುಜರಾತ್ 19.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸುವ ಮೂಲಕ ಗುರಿ ಮುಟ್ಟಿತು. ವೃದ್ಧಿಮಾನ್ ಸಹಾ 29, ಶುಬ್ನಂ ಗಿಲ್ 31, ರಾಹುಲ್ ತೆವಾತಿಯಾ 43, ಡೇವಿಡ್ ಮಿಲ್ಲರ್ 39 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.