ಹೈದರಾಬಾದ್‌ ಸನ್‌ರೈಸರ್ಸ್‌ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ

Sampriya

ಸೋಮವಾರ, 15 ಏಪ್ರಿಲ್ 2024 (20:39 IST)
Photo Courtesy X
ಬೆಂಗಳೂರು: ಸತತ ಸೋಲಿನಿಂದ ಕಂಗೆಟ್ಟಿರುವ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಸೆಣೆಸಾಡಲಿದೆ.  ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ಫಾಫ್‌ ಡುಪ್ಲೆಸಿಸ್‌ ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡ ಬ್ಯಾಟಿಂಗ್ ಹಿಡಿದಿದೆ.

ಗ್ಲೆನ್ ಮ್ಯಾಕ್ಸ್‌ವೆಲ್‌ ಮತ್ತು ಮೊಹಮ್ಮದ್‌ ಸಿರಾಜ್‌ ತಂಡದಿಂದ ಹೊರಗುಳಿಯುವ ಮೂಲಕ ಆರ್‌ಸಿಬಿ ತಂಡದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಇನ್ನೂ ಅತ್ತ ಎಸ್‌ಆರ್‌ಎಚ್‌ ತಂಡವು ಮೊದಲಿಗೆ ಬ್ಯಾಟಿಂಗ್‌ ಮಾಡುತ್ತಿದೆ. ತಂಡದಲ್ಲಿ ಯಾವ ಬದಲವಾಣೆಯನ್ನೂ ಮಾಡಿಲ್ಲ.

ಆರ್‌ಸಿಬಿ ತಂಡದಲ್ಲಿ ಆಟಗಾರರ ಪಟ್ಟಿ ಹೀಗಿದೆ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಮಹಿಪಾಲ್ ಲೊಮ್ರರ್, ವಿಜಯ್‌ ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಳ್.

ಸನ್‌ರೈಸರ್ಸ್ ಹೈದರಾಬಾದ್ ಆಟಗಾರರ ಪಟ್ಟಿ ಹೀಗಿದೆ: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್‌ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ