ಬೆಂಗಳೂರು: 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಈಗಾಗಲೇ 31 ಪಂದ್ಯಾಟಗಳು ನಡೆದಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಮೊದಲೆರಡು ಸ್ಥಾನದಲ್ಲಿ ಮುನ್ನುಗ್ಗುತ್ತಿದೆ.
ಇನ್ನೂ ಸತತ ಸೋಲಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಯ ಸ್ಥಾನದಲ್ಲಿದೆ.
ರಾಜಸ್ಥಾನ ರಾಯಲ್ಸ್ ತಮ್ಮ ಅಮೋಘ ಪ್ರದರ್ಶನದ ಮೂಲಕ ಆಡಿದ 7 ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಸೋಲು ಅನುಭವಿಸಿ, 6 ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಭದ್ರಪಡಿಸಿಕೊಂಡಿದೆ.
ಇನ್ನೂ ಎರಡನೇ ಸ್ಥಾನದಲ್ಲಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಆಡಿದ 6 ಪಂದ್ಯಗಳಲ್ಲಿ ಎರಡರಲ್ಲಿ ಸೋಲನ್ನು ಅನುಭವಿಸಿ, ನಾಲ್ಕರಲ್ಲಿ ಗೆಲುವು ಸಾಧಿಸುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ಲೀಗ್ ಹಂತದಲ್ಲಿ ನಡೆಯುವ ಮುಂದಿನ ಎಲ್ಲ ಪಂದ್ಯಗಳಲ್ಲಿ ಗೆಲ್ಲುವ ಅನಿವಾರ್ಯತೆ ಇದೆ. ಇಲ್ಲದಿದ್ದರೆ ಫ್ಲೇ ಆಫ್ ಹಾದಿ ಬಹುತೇಕ ಮುಚ್ಚಲಿದೆ.
ಇನ್ನು 6 ಪಂದ್ಯಗಳಲ್ಲಿ 4 ಜಯ ಹಾಗೂ 2 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಸ್ಥಾನದಲ್ಲಿದೆ. ಸನ್ರೈಸರ್ಸ್ ಹೈದರಾಬಾದ್ ತಂಡವು 6 ಪಂದ್ಯಗಳಲ್ಲಿ 4 ಜಯ ಸಾಧಿಸಿ ನಾಲ್ಕನೇ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
6 ಮ್ಯಾಚ್ಗಳಲ್ಲಿ 3 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 6ನೇ ಸ್ಥಾನ ಅಲಂಕರಿಸಿದೆ.
ಪಂಜಾಬ್ ಕಿಂಗ್ಸ್ ತಂಡವು 7ನೇ ಸ್ಥಾನದಲ್ಲಿದ್ದು, ಆಡಿರುವ 6 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ.
6 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 4 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ. 6 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.975 ನೆಟ್ ರನ್ ರೇಟ್ನೊಂದಿಗೆ 4 ಅಂಕ ಪಡೆದುಕೊಂಡಿದೆ.
7 ಪಂದ್ಯಗಳನ್ನಾಡಿರುವ ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 72ರ ಸರಾಸರಿಯಲ್ಲಿ 361ರನ್ ಸೇರಿಸಿ ಈ ಐಪಿಎಲ್ ಆವೃತ್ತಿಯಲ್ಲಿ ಗರಿಷ್ಠ ರನ್ ಗಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಯಜುವೇದ್ರ ಚಾಹಲ್ 12 ವಿಕೆಟ್‌ಗಳೊಂದಿಗೆ ಗರಿಷ್ಠ ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.