ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್ ಗೆ ಸನ್ ರೈಸರ್ಸ್ ಹೈದರಾಬಾದ್ ಎದುರಾಳಿ

ಗುರುವಾರ, 5 ಮೇ 2022 (10:54 IST)
ಮುಂಬೈ: ಐಪಿಎಲ್ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಂದು ಸನ್ ರೈಸರ್ಸ್ ಹೈದರಾಬಾದ್ ಪಂದ್ಯವಾಡಲಿದೆ.

ಆಡಿದ 9 ಪಂದ್ಯಗಳ ಪೈಕಿ ಐದು ಸೋಲು ಕಂಡಿರುವ ರಿಷಬ್ ಪಂತ್ ಪಡೆ ಕಳೆದ ಪಂದ್ಯದಲ್ಲಿ ಕೋಲ್ಕೊತ್ತಾ ವಿರುದ್ಧ ಗೆಲುವು ಕಂಡಿತ್ತು. ಹೀಗಾಗಿ ಅದೇ ಪ್ರದರ್ಶನ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.

ಆದರೆ ಸನ್ ರೈಸರ್ಸ್ ಹೈದರಾಬಾದ್ ಕಳೆದ ಎರಡು ಪಂದ್ಯಗಳಲ್ಲಿ ಸೋತಿದ್ದು, ಮರಳಿ ಗೆಲುವು ಕಾಣುವ ಒತ್ತಡದಲ್ಲಿದೆ. ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್ ಉತ್ತಮವಾಗಿದ್ದರೂ ದುರಾದೃಷ್ಟವಶಾತ್ ಹೈದರಾಬಾದ್ ಗೆ ಸೋಲಾಗಿತ್ತು. ಇಂದು ಅದೃಷ್ಟ ಬದಲಾಗುವ ನಿರೀಕ್ಷೆಯಿದೆ. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ