ಟಿ20 ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 10 ಸಾವಿರ ರನ್

ಸೋಮವಾರ, 27 ಸೆಪ್ಟಂಬರ್ 2021 (09:35 IST)
ದುಬೈ: ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿತ್ತು.


ತಂಡ ಅಭೂತಪೂರ್ವ ಗೆಲುವು ಸಾಧಿಸಿದ್ದಲ್ಲದೆ, ಕೊಹ್ಲಿಯೂ ವೈಯಕ್ತಿಕ ದಾಖಲೆಯೊಂದನ್ನು ಮಾಡಿದ್ದಾರೆ. ನಿನ್ನೆಯ ಪಂದ್ಯದಲ್ಲಿ 51 ರನ್ ಗಳಿಸಿದ್ದ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರೈಸಿದ ಆಟಗಾರ ಎಂಬ ದಾಖಲೆ ಮಾಡಿದರು.

ಐಪಿಎಲ್, ಅಂತಾರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ಎಲ್ಲಾ ಟಿ20 ಪಂದ್ಯಗಳನ್ನು ಒಳಗೊಂಡ ರನ್ ಇದಾಗಿದೆ. ಇದಕ್ಕಾಗಿ ಅವರು 314 ಟಿ20 ಪಂದ್ಯಗಳನ್ನು ಆಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ