ಎಚ್ಚರ ಗ್ರಾಹಕರೆ: ಈರುಳ್ಳಿ ದರ ಪ್ರತಿ ಕೆಜಿಗೆ 100 ರೂಪಾಯಿಗಳಿಗೆ ತಲುಪಲಿದೆ

ಮಂಗಳವಾರ, 22 ಅಕ್ಟೋಬರ್ 2013 (20:19 IST)
PTI
ಈರುಳ್ಳಿ ಬೆಲೆ ಮತ್ತೆ ಗಗನಕ್ಕೇರಿದ್ದು, ಮಾರುಕಟ್ಟೆಗೆ ಈರುಳ್ಳಿ ಸಮರ್ಪಕವಾಗಿ ಪೂರೈಕೆಯಾಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈರುಳ್ಳಿಯನ್ನು ಕೆಜಿಗೆ 90 ರುಪಾಯಿಯಂತೆ ಆಮದು ಮಾಡಿಕೊಳ್ಳಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕ ಸಚಿವ ಆನಂದ್ ಶರ್ಮಾ ಅವರು ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮವಾಗಿ ದಾಸ್ತಾನು ಮಾಡುತ್ತಿರುವ ಕಾರಣದಿಂದಾಗಿ ದೇಶದ ಮಾರುಕಟ್ಟೆಗೆ ಸಮರ್ಪಕವಾಗಿ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಈರುಳ್ಳಿ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದೆ. ದೇಶದಲ್ಲಿ ಈರುಳ್ಳಿಯ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಕೆಜಿಗೆ 90 ರುಪಾಯಿಯಂತೆ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ತೀರ್ಮಾನಿಸಿದೆ ಎಂದರು.

ಇದೇ ವೇಳೆ, ದೇಶದಲ್ಲಿ ಈರುಳ್ಳಿಗೆ ಕೊರತೆ ಹೆಚ್ಚಾಗಿದ್ದು, ರೈತರಿಂದ ವ್ಯಾಪಾರಿಗಳು ಈರುಳ್ಳಿಯನ್ನು ಖರೀದಿಸಿ, ಅದನ್ನು ಅಕ್ರಮ ದಾಸ್ತಾನು ಮಾಡಿಕೊಂಡಿರುವುದು ಇದಕ್ಕೆ ಕಾರಣ. ಹೀಗಾಗಿ ರಾಜ್ಯ ಸರ್ಕಾರಗಳು ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಡಿಸೆಂಬರ್ ಕೊನೆಯ ವೇಳೆಗೆ ಈರುಳ್ಳಿ ಬೆಲೆ ಕಡಿಮೆಯಾಗುವ ಸಾಧ್ಯತೆ ಇದೆ. ಹೊಸದಾಗಿ ಬೆಳೆದ ಈರುಳ್ಳಿ ಮಾರುಕಟ್ಟೆಯನ್ನು ಪ್ರವೇಶಿಸುವ ಹಿನ್ನೆಲೆಯಲ್ಲಿ ಬೆಲೆ ಕಡಿಮೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ