ಫಾರೆಕ್ಸ್‌: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ

ಸೋಮವಾರ, 29 ನವೆಂಬರ್ 2010 (11:37 IST)
ಡಾಲರ್ ಎದುರಿಗೆ ಏಷ್ಯಾದ ಕರೆನ್ಸಿಗಳು ಚೇತರಿಕೆ ಕಂಡ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 8 ಪೈಸೆ ಏರಿಕೆಯಾಗಿ 45.76 ರೂಪಾಯಿಗಳಿಗೆ ತಲುಪಿದೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ಯುರೋ ಮೌಲ್ಯದ ಕುಸಿತ ಹಾಗೂ ಶೇರುಪೇಟೆಯ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಅಮುದು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ 32 ಪೈಸೆ ಕುಸಿತ ಕಂಡು 45.84/85 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 8 ಪೈಸೆ ಏರಿಕೆಯಾಗಿ 45.76 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 133.48 ಪಾಯಿಂಟ್‌ಗಳ ಚೇತರಿಕೆ ಕಂಡು 19,270.09 ಅಂಕಗಳಿಗೆ ತಲುಪಿದೆ.

ವೆಬ್ದುನಿಯಾವನ್ನು ಓದಿ