ಬಜೆಟ್‌ನಲ್ಲಿ ಶಿಕ್ಷಣ, ಉದ್ಯೋಗಕ್ಕೆ ಹೆಚ್ಚು ಒತ್ತು ನೀಡಿ: ಇನ್ಫೋಸಿಸ್

ಮಂಗಳವಾರ, 28 ಫೆಬ್ರವರಿ 2012 (13:47 IST)
PR
ಮಾರ್ಚ್ 16 ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್, ದೇಶದ ಪ್ರಗತಿಗೆ ಶಿಕ್ಷಣ ತುಂಬಾ ಅಗತ್ಯವಿದ್ದು, ಉನ್ನತ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡವಂತಹಾ ಯೋಜನೆಗಳಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ಜತೆಗೆ ವಿದೇಶಿ ನೇರ ಹೂಡಿಕೆಗೆ ಅವಕಾಶ ಮಾಡಿಕೊಡುವ ಮೂಲಕ ದೇಶದಲ್ಲಿ ಸೃಷ್ಟಿಯಾಗಿರುವ ನಿರುದ್ಯೋಗ ಸಮಸ್ಯೆಯನ್ನು ನೀಗಿಸಲು ಕ್ರಮಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜತೆಗೆ ಆರೋಗ್ಯ, ವಸತಿ, ಪೌಷ್ಟಿಕ ಆಹಾರದ ಕುರಿತೂ ಹೆಚ್ಚಿನ ಗಮನಹರಿಸಬೇಕಾಗಿರುವುದಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ