ಪಿಯುಸಿ ಪಾಸಾದವರಿಗೆ ರಕ್ಷಣಾ ಸಚಿವಾಲಯದಲ್ಲಿ ವಿವಿಧ ಹುದ್ದೆಗಳು

ಗುರುವಾರ, 18 ಸೆಪ್ಟಂಬರ್ 2014 (13:21 IST)
ಮಿನಿಸ್ಟ್ರಿ ಆಫ್ ಡಿಫೆನ್ಸ್‌ನಲ್ಲಿ (ರಕ್ಷಣಾ ಸಚಿವಾಲಯ) ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಭಾರತೀಯ ನಾಗರೀಕರು ಮಾತ್ರ ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 12ನೇ ತರಗತಿ ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
 
ಇದನ್ನು ಹೊರತು ಪಡಿಸಿ ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಹಿಂದಿ ಭಾಷೆಯಲ್ಲಿ ಪ್ರತಿ ನಿಮಿಷಕ್ಕೆ 30 ಶಬ್ದ ಮತ್ತು ಆಂಗ್ಲ ಭಾಷೆಯಲ್ಲಿ ಪ್ರತಿ ನಿಮಿಷಕ್ಕೆ 35 ಶಬ್ದಗಳನ್ನು ಟೈಪಿಂಗ್ ಮಾಡುವಲ್ಲಿ ಪರಿಣಿತಿ ಹೊಂದಿರಬೇಕು. 18ರಿಂದ 27 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು.
 
ಮೀಸಲಾತಿ ವರ್ಗದವರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ವಯೋಮಿತಿ ಗಣನೆ ಅಕ್ಟೋಬರ್ 31,2014 ರಿಂದ ಪರಿಗಣಿತವಾಗುತ್ತದೆ.

ವೆಬ್ದುನಿಯಾವನ್ನು ಓದಿ