2ಜಿ ಸ್ಪೆಕ್ಟ್ರಂ ಆರೋಪಿಗಳಿಗೆ ಶಿಕ್ಷೆಯಾಗಲಿ:ರತನ್ ಟಾಟಾ

ಶನಿವಾರ, 27 ನವೆಂಬರ್ 2010 (12:05 IST)
2ಜಿ ತರಂಗಾಂತರಗಳ ಹಂಚಿಕೆಯಲ್ಲಿ ಅವ್ಯವಹಾರವೆಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ಹೇಳಿದ್ದಾರೆ.

ಏತನ್ಮಧ್ಯೆ, ಅನಧಿಕೃತ ಟೇಪ್‌ಗಳ ಕುರಿತಂತೆ ಮಾಧ್ಯಮಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

ಇದೊಂದು ಕೆಟ್ಟ ಕಾಲವಾಗಿದೆ. ಆದರೆ, ಸರಕಾರ ಹಗರಣದಲ್ಲಿ ಭಾಗಿಯಾದವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ಬಯಸುವುದಾಗಿ ಹೇಳಿದ್ದಾರೆ.

ಮಾಧ್ಯಮಗಳು ಸ್ಪರ್ಧಾತ್ಮಕವಾಗಿ ಕಾರ್ಯನಿರ್ವಹಿಸದೆ ಸತ್ಯಾಂಶವನ್ನು ಬಿತ್ತರಿಸುವತ್ತ ಹೆಚ್ಚಿನ ಗಮನಹರಿಸುವುದು ಸೂಕ್ತ ಎಂದು ಟಾಟಾ ಮೋಟಾರ್ಸ್ ಮುಖ್ಯಸ್ಥ ರತನ್ ಟಾಟಾ ಸಲಹೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ