ವಿಮಾನದ ಶೌಚಾಲಯದಲ್ಲಿ 70 ಲಕ್ಷ ಮೌಲ್ಯದ 2.5 ಕೆಜಿ ಚಿನ್ನ ಪತ್ತೆ

ಮಂಗಳವಾರ, 30 ಆಗಸ್ಟ್ 2016 (15:11 IST)
ದುಬೈನಿಂದ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್‌ ಇಂಡಿಯಾ ವಿಮಾನದ ಟಾಯ್ಲೆಟ್‌ನಲ್ಲಿ 2.5 ಕೆ.ಜಿ.ಚಿನ್ನದ ಆಭರಣಗಳು ಪತ್ತೆಯಾಗಿದ್ದು, ಕಸ್ಟಮ್ಸ್ ಮತ್ತು ಕೇಂದ್ರೀಯ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಇಂದು ಮುಂಜಾನೆ ದುಬೈನಿಂದ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್‌ ಇಂಡಿಯಾ ವಿಮಾನದ ಟಾಯ್ಲೆಟ್‌ನಲ್ಲಿ 70 ಲಕ್ಷ ರೂಪಾಯಿ ಬೆಲೆ ಬಾಳುವ 2.5 ಕೆಜೆ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. 
 
ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಿಮಾನದ ಸಿಬ್ಬಂದಿ ಚಿನ್ನಕಳ್ಳಸಾಗಾಣೆಯಲ್ಲಿ ತೊಡಗಿರಬಹುದು ಎನ್ನುವ ಸಂಶಯ ವ್ಯಕ್ತಪಡಿಸಿದ್ದು, ಪ್ರಯಾಣಿಕರ ಪಟ್ಟಿಯಲ್ಲಿರುವ ಹೆಸರುಗಳಿರುವ ವ್ಯಕ್ತಿಗಳನ್ನು ತನಿಖೆಗೊಳಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 
 
ತನಿಖಾಧಿಕಾರಿಗಳು ತನಿಖೆಯನ್ನು ಪೂರ್ಣಗೊಳಿಸಿದ ನಂತರ ಗೋವಾದಿಂದ ವಿಮಾನ ಬೆಂಗಳೂರಿಗೆ ಪ್ರಯಾಣಿಸಿದೆ ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.
 
ಪ್ರಸಕ್ತ ಸಾಲಿನಲ್ಲಿ ದುಬೈನಿಂದ ಗೋವಾಕ್ಕೆ ಆಗಮಿಸುವ ಏರ್ ಇಂಡಿಯಾ ವಿಮಾನದಲ್ಲಿ ಮೂರನೇಯ ಬಾರಿಗೆ ವಾರಸುದಾರರಿಲ್ಲದ ಚಿನ್ನ ಸಾಗಟ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ