ಅಲಹಾಬಾದ್ ಬ್ಯಾಂಕ್ ಲಾಭ ರೂ.75 ಕೋಟಿ

ಬುಧವಾರ, 15 ಫೆಬ್ರವರಿ 2017 (12:35 IST)
ಸರಕಾರಿ ಸ್ವಾಮ್ಯದ ಅಲಹಾಬಾದ್ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೂರನೇ ತ್ರೈಮಾಸಿಕದಲ್ಲಿ ರೂ.75 ಕೋಟಿ ನಿವ್ವಳ ಲಾಭ ಗಳಿಸಿದೆ. ಅನುತ್ಪಾದಕ ಆಸ್ತಿಗೆ ಮೇಲಿನ ಹೂಡಿಕೆ ಕಡಿಮೆ ಮಾಡಿದ ಕಾರಣ ಈ ಬೆಳವಣಿಗೆ ಸಾಧ್ಯವಾಗಿದೆ ಎಂದು ಕಂಪೆನಿ ತಿಳಿಸಿದೆ.
 
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ರೂ.486 ಕೋಟಿ ನಿವ್ವಳ ನಷ್ಟ ಅನುಭವಿಸಿತ್ತು. ಕಳೆದ ಮೂರನೇ ತ್ರೈಮಾಸಿಕದಲ್ಲಿ ರೂ.5,030 ಕೋಟಿಯಷ್ಟಿದ್ದ ಒಟ್ಟಾರೆ ಆದಾಯ ಈ ಮೂರನೇ ತ್ರೈಮಾಸಿಕದಲ್ಲಿ ರೂ.5,025 ಕೋಟಿಗೆ ಕುಸಿದಿದೆ ಎಂದು ಬ್ಯಾಂಕ್ ತಿಳಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ