Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ
ಹೊಸ ಪಟೋರ ಮತ್ತು ಹಳೆ ಪಟೋರ ದರದಲ್ಲಿ ಕೊಂಚ ಇಳಿಕೆಯಾಗಿದೆ. ನಿನ್ನೆ ಹೊಸ ಪಟೋರ ದರ ಮತ್ತು ಹಳೆ ಪಟೋರ ದರ ತಲಾ 360 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 255 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರವೂ ವ್ಯತ್ಯಾಸವಾಗಿಲ್ಲ. ಇಂದೂ ತಲಾ 310 ರೂ.ಆಗಿದೆ.
ಕಾಳುಮೆಣಸು ದರ
ನಿನ್ನೆ ಕಾಳುಮೆಣಸು ದರದಲ್ಲಿಏರಿಕೆಯಾಗದೇ ಇದ್ದರೂ ಇಳಿಕೆಯಾಗಿಲ್ಲ ಎನ್ನುವುದೇ ಸಮಾಧಾನಕರ ವಿಚಾರವಾಗಿತ್ತು. ಆದರೆ ಇಂದು ಮತ್ತೆ 5 ರೂ. ಕುಸಿತವಾಗಿದೆ. ಇಂದು 645 ರೂ.ಗಳಷ್ಟಿವೆ. ಇನ್ನು ಒಣಕೊಬ್ಬರಿ ಬೆಲೆ ಕಳೆದ ವಾರ ಏರಿಕೆಯಾಗಿತ್ತು. ಆದರೆ ಈಗ ನಾಲ್ಕೈದು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಇಂದೂ 235 ರೂ. ಗಳಷ್ಟಿದೆ.