ಬೆಂಗಳೂರು: ಅಡಿಕೆ ಬೆಳೆಗಾರರಿಗೆ ಯಾಕೋ ಬೆಲೆ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬ ಸ್ಥಿತಿಯಾಗಿದೆ. ಆದರೆ ಕಾಳು ಮೆಣಸು ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ. ಕೊಬ್ಬರಿ ಬೆಲೆ ಮತ್ತೆ ಇಳಿಕೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ವಾರದ ಆರಂಭದಲ್ಲೇ ಇಳಿಕೆಯಾಗಿ ರೈತರಿಗೆ ನಿರಾಸೆಯಾಗಿತ್ತು. ಆದರೆ ಈಗ ಎರಡು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಮೊನ್ನೆಯಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ. ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರ ತಲಾ 370 ರೂ.ಗಳಷ್ಟಿತ್ತು. ಕಳೆದ ಕೆಲವು ದಿನಗಳಿಂದ ಇವೆರಡರ ಬೆಲೆಯೂ ಅದೇ ಸ್ಥಿತಿಯಲ್ಲಿದೆ. ಹೊಸ ಉಳ್ಳಿ ದರದಲ್ಲೂ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 230 ರೂ.ಗಳಾಗಿದೆ. ಮೊನ್ನೆಯಷ್ಟೇ ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ಭಾರೀ ಇಳಿಕೆಯಾಗಿದೆ. ಆದರೆ ಇದೀಗ ಕೆಲವು ದಿನಗಳಿಂದ ಅದೂ ಯಥಾಸ್ಥಿತಿಯಲ್ಲಿದೆ. ಇವೆರಡರ ದರ ಈಗ 285 ರೂ.ಗೆ ಬಂದು ತಲುಪಿದೆ.
ಕಾಳುಮೆಣಸು, ಕೊಬ್ಬರಿ ದರ
ಆದರೆ ಕೊಬ್ಬರಿ ಮತ್ತು ಕಾಳುಮೆಣಸು ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ. ಕಾಳುಮೆಣಸು ದರದಲ್ಲೂ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು. 5 ರೂ. ಏರಿಕೆಯಾಗಿದ್ದು 655 ರೂ.ಗಳಷ್ಟಿವೆ. ಏರುಗತಿಯಲ್ಲಿದ್ದ ಕೊಬ್ಬರಿ ಬೆಲೆ ಇಂದು ದಿಡೀರ್ 15 ರೂ. ಇಳಿಕೆಯಾಗಿದೆ. ಒಣ ಕೊಬ್ಬರಿ ಬೆಲೆ ಇಂದು 260 ರೂ.ಗಳಾಗಿದೆ.