ಬೆಂಗಳೂರು: ಅಡಿಕೆ ಬೆಳೆಗಾರರಿಗೆ ಇಂದೂ ನಿರಾಸೆಯೇ ಗತಿಯಾಗಿದೆ. ಬೆಲೆ ಏರಿಕೆ ನಿರೀಕ್ಷೆಗಳು ಸುಳ್ಳಾಗಿದ್ದು ಕೆಲವು ವರ್ಗದ ಅಡಿಕೆ ಬೆಲೆ ಇಳಿಕೆಯಾಗಿದೆ. ಆದರೆ ಕಾಳು ಮೆಣಸು, ಕೊಬ್ಬರಿ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ವಾರದ ಆರಂಭದಲ್ಲೇ ಇಳಿಕೆಯಾಗಿ ರೈತರಿಗೆ ನಿರಾಸೆಯಾಗಿತ್ತು. ಆದರೆ ಈಗ ಎರಡು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಮೊನ್ನೆಯಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ. ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರ ತಲಾ 370 ರೂ.ಗಳಷ್ಟಿತ್ತು. ಕಳೆದ ಕೆಲವು ದಿನಗಳಿಂದ ಇವೆರಡರ ಬೆಲೆಯೂ ಅದೇ ಸ್ಥಿತಿಯಲ್ಲಿದೆ. ಹೊಸ ಉಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ತಲಾ 5 ರೂ. ಇಳಿಕೆಯಾಗಿದೆ. ಇವೆರಡರ ದರ ಈಗ 275 ರೂ.ಗೆ ಬಂದು ತಲುಪಿದೆ.
ಕಾಳುಮೆಣಸು, ಕೊಬ್ಬರಿ ದರ
ಆದರೆ ಕೊಬ್ಬರಿ ಮತ್ತು ಕಾಳುಮೆಣಸು ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ. ಕಾಳುಮೆಣಸು ದರದಲ್ಲೂ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು. 5 ರೂ. ಏರಿಕೆಯಾಗಿದ್ದು 655 ರೂ.ಗಳಷ್ಟಿವೆ. ಏರುಗತಿಯಲ್ಲಿದ್ದ ಕೊಬ್ಬರಿ ಬೆಲೆ ಇಂದು ದಿಡೀರ್ 15 ರೂ. ಇಳಿಕೆಯಾಗಿದೆ. ಒಣ ಕೊಬ್ಬರಿ ಬೆಲೆ ಇಂದು 260 ರೂ.ಗಳಾಗಿದೆ.