Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Krishnaveni K

ಮಂಗಳವಾರ, 10 ಫೆಬ್ರವರಿ 2026 (10:46 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ನಿನ್ನೆ ಅಡಿಕೆ ದರದಲ್ಲಿ ಏರಿಕೆಯಾಗಿರುವುದು ಖಷಿಯ ಸಂಗತಿ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
 

ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆಯಾಗಬಹುದೇನೋ ಎಂಬ ನಿರೀಕ್ಷೆ ಬೆಳೆಗಾರರಲ್ಲಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಿರಲಿಲ್ಲ. ಇದರಿಂದ ರೈತರ ಚಿಂತೆಗೆ ಕಾರಣವಾಗಿತ್ತು. ಇಂದು ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಮತ್ತೆ ಯಥಾಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ 470 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 545 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 545 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲಿ ಯಾವುದೇ ಏರಿಕೆ, ಇಳಿಕೆಯಾಗಿಲ್ಲ. ಹೊಸ ಪಟೋರ 410 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 425 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದು  270 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 285 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು 5 ರೂ.ಗಳಷ್ಟು ಏರಿಕೆಯಾಗಿದ್ದು 690 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು 220 ರೂ.ಗಳಷ್ಟಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ