Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Krishnaveni K

ಶನಿವಾರ, 14 ಫೆಬ್ರವರಿ 2026 (11:44 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ಮೊನ್ನೆ ಅಡಿಕೆ ದರದಲ್ಲಿ ಏರಿಕೆಯಾಗಿರುವುದು ಖಷಿಯ ಸಂಗತಿ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆಯಾಗಬಹುದೇನೋ ಎಂಬ ನಿರೀಕ್ಷೆ ಬೆಳೆಗಾರರಲ್ಲಿತ್ತು. ಮೊನ್ನೆಯಷ್ಟೇ ಅಡಿಕೆಗೆ ಕೊಂಚ ಬೆಲೆ ಏರಿಕೆಯಾಗಿತ್ತು. ಆದರೆ ಈಗ ಮತ್ತೆ ಯಥಾಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ 480 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲಿ ಇಂದು ಯಾವುದೇ ಏರಿಕೆ, ಇಳಿಕೆಯಾಗಿಲ್ಲ. ಹೊಸ ಪಟೋರ 415 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 430 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದು  280 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 290 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು 700 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು 220 ರೂ.ಗಳಷ್ಟಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ