ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ನಿನ್ನೆ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದೆ ಹೊಸ ಅಡಿಕೆ ಬೆಲೆ 500 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಪಟೋರ 400 ರೂ. ಗಳಷ್ಟಿದ್ದರೆ ಹಳೇ ಪಟೋರ 410 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಇಂದು 290 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ 290 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು 5 ರೂ ಏರಿಕೆಯಾಗಿ 670 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು ಯಥಾಸ್ಥಿತಿಯಲ್ಲಿದ್ದು 180 ರೂ.ಗಳಷ್ಟಾಗಿದೆ.