Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Krishnaveni K

ಮಂಗಳವಾರ, 15 ಏಪ್ರಿಲ್ 2025 (11:16 IST)
ಬೆಂಗಳೂರು: ಒಂದೆಡೆ ಬೆಳೆ ಕಡಿಮೆಯಾಗಿದೆ. ಆದರೆ ಇನ್ನೊಂದೆಡೆ ಅಡಿಕೆ ಬೆಳೆಗಾರರಿಗೆ ಬೆಲೆ ಏರಿಕೆಯ ಖುಷಿ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಏರಿಕೆಯಾಗಿದೆಯೇ, ಇಂದಿನ ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇತ್ತು. ಇತ್ತೀಚೆಗಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಡಿಕೆಗೆ ಬೆಲೆ ಹೆಚ್ಚಾಗಿದೆ. ಆದರೆ ಅದಕ್ಕೆ ತಕ್ಕಷ್ಟು ಬೆಳೆಯಿಲ್ಲದೇ ರೈತರು ಕಂಗಾಲಾಗಿದ್ದಾರೆ. ಹೊಸ ಅಡಿಕೆಗೆ ಇಂದು ಗರಿಷ್ಠ 440 ರೂ. ಗಳಷ್ಟಿದ್ದರೆ, ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ 475 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.

ಹೊಸ ಫಟೋರ ದರ 345 ರೂ.ಗಳಷ್ಟಾಗಿದೆ. ಹಳೆ ಫಟೋರ ದರ 355 ರೂ. ಗಳಷ್ಟಿದೆ. ಹೊಸ ಉಳ್ಳಿ ದರ  ಏರಿಕೆಯಾಗಿ ಗರಿಷ್ಠ 210 ರೂ., ಹಳೆ ಉಳ್ಳಿ ದರ 225 ಗಳಷ್ಟಿದೆ. ಹೊಸ ಕೋಕ ದರ 290 ರೂ., ಹಳೇ ಕೋಕ 300 ರೂ. ಗಳಷ್ಟಾಗಿದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿತ್ತು. ಆದರೆ ಇಂದು ಕಾಳುಮೆಣಸು ದರವೂ ಯಥಾ ಸ್ಥಿತಿಯಲ್ಲಿದೆ. ಇಂದು ಕಾಳುಮೆಣಸು ಗರಿಷ್ಠ ಬೆಲೆ 685 ರೂ.ಗಳಷ್ಟಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಷ್ಟೇ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ