Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

Krishnaveni K

ಸೋಮವಾರ, 28 ಏಪ್ರಿಲ್ 2025 (10:48 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದಿದ್ದರಿಂದ ಬೆಳೆಗಾರರಲ್ಲಿ ನಿರಾಸೆ ಮೂಡಿತ್ತು. ಆದರೆ ಇಂದು ಅಡಿಕೆ ಬೆಲೆ ಹೆಚ್ಚಳವಾಗಿದ್ದು ಬೆಳೆಗಾರರಿಗೆ ಬಂಪರ್ ಸುದ್ದಿ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆ ಬೆಳೆ ಕಡಿಮೆ, ಆದರೆ ಬೆಲೆಯೂ ಹೆಚ್ಚೂ ಆಗುತ್ತಿಲ್ಲ, ಕಡಿಮೆಯೂ ಆಗುತ್ತಿಲ್ಲ ಎನ್ನುವ ಸ್ಥಿತಿಯಿತ್ತು. ಇದು ರೈತರಿಗೆ ಕೊಂಚ ನಿರಾಸೆಯಾಗಿತ್ತು. ಆದರೆ ಇಂದು ಬೆಲೆ ಕೊಂಚ ಹೆಚ್ಚಳವಾಗಿದ್ದು ರೈತರಿಗೆ ಹರ್ಷ ತಂದಿದೆ. ಇಂದು ಹೊಸ ಅಡಿಕೆ ಬೆಲೆಯಲ್ಲಿ ಹೆಚ್ಚಳವಾಗಿದೆ. ಹೊಸ ಅಡಿಕೆಗೆ ನಿನ್ನೆ ಗರಿಷ್ಠ 440 ರೂ. ಗಳಷ್ಟಿತ್ತು. ಆದರೆ ಇಂದು 450 ರೂ.ಗಳಾಗಿವೆ. ಆದರೆ ಹಳೆ ಅಡಿಕೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ, ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.

ಆದರೆ ಪಟೋರ ದರ ನಿನ್ನೆ ಏರಿಕೆಯಾಗಿತ್ತು. ಇಂದೂ ಅದೇ ಸ್ಥಿತಿ ಮುಂದುವರಿದಿದೆ. ಹೊಸ ಫಟೋರ ದರ 350 ರೂ.ಗಳಷ್ಟಾಗಿದೆ. ಹಳೆ ಫಟೋರ ದರ 360 ರೂ. ಗಳಷ್ಟಿದೆ. ಹೊಸ ಉಳ್ಳಿ ದರ ಭಾರೀ ಏರಿಕೆಯಾಗಿದ್ದು ಗರಿಷ್ಠ 240 ರೂ., ಹಳೆ ಉಳ್ಳಿ ದರವೂ 240 ಗಳಷ್ಟಿದೆ. ಹೊಸ ಕೋಕ ದರ 290 ರೂ., ಹಳೇ ಕೋಕ 300 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿದೆ.  ಇಂದು ಮತ್ತೆ ಕಾಳುಮೆಣಸು ದರ ಯಥಾ ಸ್ಥಿತಿಯಲ್ಲಿದ್ದು 680 ರೂ.ಗಳಷ್ಟಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಷ್ಟೇ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ