ಬೆಂಗಳೂರು: ಇಂದು ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು ಮತ್ತು ಕೊಬ್ಬರಿ ಬೆಲೆ ಎಷ್ಟಾಗಿದೆ ಎಂಬ ವಿವರ ಇಲ್ಲಿದೆ. ಇಂದಿನ ಮಾರುಕಟ್ಟೆ ದರ ವಿವರಣೆ ಪ್ರಕಾರ ಅಡಿಕೆ, ಕಾಳುಮೆಣಸು ಬೆಲೆ ಯಥಾಸ್ಥಿತಿಯಲ್ಲಿದೆ ಎನ್ನಬಹುದು.
ರಾಜ್ಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಲೆಯಲ್ಲಿ ಪ್ರತಿನಿತ್ಯ 5-10 ರೂ.ಗಳಷ್ಟು ಏರಿಕೆಯಾಗುತ್ತಲೇ ಇತ್ತು. ಇಂದು ಫ್ರೆಶ್ ಚೋಲ್ ಅಡಿಕೆ ದರದಲ್ಲಿ ಸ್ವಲ್ಪ ಹೆಚ್ಚಳ ಕಂಡುಬಂದಿದೆ. ಇಂದಿನ ಮಾರುಕಟ್ಟೆ ದರ ಹೇಗಿದೆ ಇಲ್ಲಿದೆ ವಿವರ.
ಹೊಸ ಅಡಿಕೆಗೆ ನಿನ್ನೆ ಮಾರುಕಟ್ಟೆಯಲ್ಲಿ ಪ್ರತೀ ಕೆ.ಜಿ.ಗೆ ಗರಿಷ್ಠ 400 ರೂ.ಗಳಷ್ಟಿತ್ತು. ಇದು ಇಂದೂ ಮುಂದುವರಿದಿದೆ. ಫ್ರೆಶ್ ಚೋಲ್ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ನಾಲ್ಕೈದು ದಿನಗಳಿಂದ 460 ರೂ.ಗಳಲ್ಲೇ ಇದೆ. ಡಬಲ್ ಚೋಲ್ ಅಡಿಕೆಗೆ 495 ರೂ.ಗಳಷ್ಟು ದರವಿತ್ತು. ಇಂದೂ ಅದೇ ದರ ಮುಂದುವರಿದಿದೆ. ಇಂದಿನ ಮಾರುಕಟ್ಟೆ ಪ್ರಕಾರ ಈ ದರಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
ಕಾಳುಮೆಣಸು ದರ
ಕಾಳು ಮೆಣಸು ದರವೂ ಕಳೆದ ನಾಲ್ಕೈದು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಕಾಳುಮೆಣಸಿಗೆ ನಿನ್ನೆ ಗರಿಷ್ಠ 680 ರೂ.ಗಳಷ್ಟಿತ್ತು. ಇಂದೂ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇನ್ನು, ಒಣಕೊಬ್ಬರಿ ಬೆಲೆ ನಿನ್ನೆ ಗರಿಷ್ಠ 150 ರೂ.ಗಳಷ್ಟಿದೆ. ಇದರ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ.