ಟೊಯೊಟೊ ಕಿರ್ಲೋಸ್ಕರ್ ಕ್ಯಾಂಪಸ್ ಸಂದರ್ಶನ

ಬುಧವಾರ, 4 ಜನವರಿ 2017 (14:50 IST)
ರಾಮನಗರ ಜಿಲ್ಲೆಯ ಬಿಡದಿಯ ಮೆ.ಟೊಯೊಟೊ ಕಿರ್ಲೋಸ್ಕರ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಐ.ಟಿ.ಐ. ಪಾಸಾದ ಅಭ್ಯರ್ಥಿಗಳಿಗಾಗಿ ವಿವಿಧ ವೃತ್ತಿಗಳ ಅಪ್ರೆಂಟಿಶಿಪ್ ಹಾಗೂ ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಗೆ ಟೋಯೊಟೋ ತಂತ್ರಜ್ಞ ತರಬೇತಿಗಳಿಗಾಗಿ 2017ರ ಜನವರಿ 4ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಎಂ.ಎಸ್.ಕೆ.ಮಿಲ್ ರಸ್ತೆಯ ಪುರುಷರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಸಲಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಪ್ರಾಚಾರ್ಯ ಎಸ್.ಎನ್.ಪಂಚಾಳ ಅವರು ತಿಳಿಸಿದ್ದಾರೆ.
 
ಐ.ಟಿ.ಐ. ವೃತ್ತಿಯ ಫಿಟ್ಟರ್, ಎಲೆಕ್ಟ್ರಿಶಿಯನ್, ವೆಲ್ಡರ್, ಎಂ.ಎಂ.ವಿ., ಟರ್ನರ್, ಡಿಜೇಲ್ ಮೆಕ್ಯಾನಿಕ್ ಮತ್ತು ಟಿಡಿಎಂ ವೃತ್ತಿಗಳಲ್ಲಿ ಕನಿಷ್ಠ ಶೇ. 50 ರಷ್ಟು ಅಂಕ ಪಡೆದು ಪಾಸಾದ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 40ಕ್ಕಿಂತ ಹೆಚ್ಚು ಅಂಕಪಡೆದು ಪಾಸಾದ 18ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಎನ್.ಸಿ.ವಿ.ಟಿ.ಗೆ ಒಂದು ವರ್ಷ, ಎಸ್.ಸಿ.ವಿ.ಟಿ.ಗೆ ಎರಡು ವರ್ಷ ಅಪ್ರೆಂಟಿಶಿಪ್ ತರಬೇತಿ ಹಾಗೂ ಕೌಶಲ್ಯ ಭಾರತ ಕಾರ್ಯಕ್ರಮದಡಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 40ಕ್ಕಿಂತ ಹೆಚ್ಚು ಅಂಕ ಪಡೆದು ಪಾಸಾದ 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಟೋಯೊಟೋ ತಂತ್ರಜ್ಞ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು. 
 
ಅರ್ಹ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನಾಂಕದಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ದೂರವಾಣಿ ಸಂಖ್ಯೆ 080-66292103ನ್ನು ಸಂಪರ್ಕಿಸಲು ಕೋರಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ