ಮತ್ತೆ ಮೂರು ಬ್ಯಾಂಕ್‍ ಗಳ ವಿಲೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ. ಅವು ಯಾವುವು ಗೊತ್ತಾ?

ಬುಧವಾರ, 19 ಸೆಪ್ಟಂಬರ್ 2018 (07:27 IST)
ನವದೆಹಲಿ : ಸಾರ್ವಜನಿಕ ಸ್ವಾಮ್ಯದ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‍ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿರುವುದಾಗಿ ತಿಳಿದುಬಂದಿದೆ.


ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು(ಎಸ್‍ಬಿಎಂ), ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಹಾಗೂ ಜೈಪುರ್ (ಎಎಸ್‍ಬಿಜೆ), ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್(ಎಸ್‍ಟಿ), ಸ್ಟೇಟ್ ಬ್ಯಾಂಕ್ ಪಟಿಯಾಲಾ (ಎಎಸ್‍ಬಿಪಿ), ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ (ಎಎಸ್‍ಬಿಎಚ್)ಹಾಗೂ ಭಾರತೀಯ ಮಹಿಳಾ ಬ್ಯಾಂಕ್ (ಬಿಬಿಎಂ)ಗಳು ಎಸ್‍ಬಿಐ ಜೊತೆ 2017ರ ಏಪ್ರಿಲ್ 1ರಂದು ವಿಲೀನಗೊಂಡಿದ್ದವು.


ಇದೀಗ ಕೇಂದ್ರ ಸರ್ಕಾರ  ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್ ವಿಲೀನಗೊಳಿಸುವ ಪ್ರಸ್ತಾಪ ಮುಂದಿಟ್ಟಿದ್ದು, ಶೀಘ್ರವೇ ಮೂರು ಬ್ಯಾಂಕ್‌ಗಳ ಬೋರ್ಡ್ ಮೀಟಿಂಗ್ ನಡೆದು ಅಂತಿಮ ತೀರ್ಮಾನ ಹೊರಬೀಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ