ಫೇಸ್‌ಬುಕ್‌ ಜೊತೆ ಒಪ್ಪಂದ ಮಾಡಿಕೊಂಡ ನಾಸ್ಕಾಂ

ಶನಿವಾರ, 7 ಮೇ 2016 (18:45 IST)
ವಾಷಿಂಗ್ಟನ್ : ದೇಶಿಯ ಯುವ ಉದ್ಯಮಿಗಳಿಗೆ ನೆರವು ನೀಡಲು ಭಾರತೀಯ ಸಾಫ್ಟ್‌ವೇರ್‌ ಸಂಸ್ಥೆಗಳ ಒಕ್ಕೂಟ ನಾಸ್ಕಾಂ, ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಭಾರತೀಯ ಯುವ ಉದ್ಯಮಿಗಳಲ್ಲಿ ದೇಶದ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಾಯಕತ್ವದ ಗುಣ ಬೆಳೆಸುವ ಹಿನ್ನೆಲೆಯಲ್ಲಿ ಫೇಸ್‌ಬುಕ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ನಾಸ್ಕಾಂ ಅಧ್ಯಕ್ಷ ಆರ್‌. ಚಂದ್ರಶೇಖರ್‌ ತಿಳಿಸಿದ್ದಾರೆ.
 
ಇತ್ತೀಚೆಗೆ ಅಮೆರಿಕದ ಸಿಲಿಕಾನ್‌ ವ್ಯಾಲಿಯಲ್ಲಿ ನಾಸ್ಕಾಂ ಮತ್ತು ಫೇಸ್‌ಬುಕ್‌ ಈ ಒಪ್ಪಂದಕ್ಕೆ ಸಹಿ ಹಾಕಿವೆ.

ವೆಬ್ದುನಿಯಾವನ್ನು ಓದಿ