15 ವರ್ಷ ತುಂಬಿದ ಕೇಂದ್ರ, ರಾಜ್ಯ ಸರ್ಕಾರಿ ವಾಹನಗಳು ಏಪ್ರಿಲ್ 1 ರಿಂದ ಗುಜರಿ ಸೇರಲಿವೆ. ಪರಿಸರಕ್ಕೆ ಮಾರಕವಾಗಿರುವ ವಾಹನ ಬಳಕೆ ನಿಲ್ಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, 15 ವರ್ಷ ಪೂರ್ಣಗೊಂಡ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಾಹನಗಳ ನೋಂದಣಿಯನ್ನು ಏಪ್ರಿಲ್ 1 ರಿಂದ ರದ್ದುಪಡಿಸಲಾಗುವುದು.