ಬೆಂಗಳೂರು: ಚಿನ್ನದ ಬೆಲೆ ರಾಕೆಟ್ ವೇಗದಲ್ಲಿ ಗಗನಕ್ಕೇರುತ್ತಿದೆ. ಇಂದಂತೂ ಇನ್ನೂ ಎತ್ತರಕ್ಕೇರಿದ್ದು, ಲಕ್ಷದ ಗಡಿಗೆ ಇನ್ನೂ ಹತ್ತಿರವಾಗಿದೆ. ಇಂದು ಪರಿಶುದ್ಧ ಚಿನ್ನದ ದರ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಇಂದೂ ಯಥಾಸ್ಥಿತಿಯಲ್ಲಿದೆ. ಮೊನ್ನೆ ಚಿನ್ನದ ಬೆಲೆ ಗಗನಕ್ಕೇರಿತ್ತು. ಇಂದು ಪರಿಶುದ್ಧ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ಬೆಲೆ 98, 510 ರೂ.ಗಳಷ್ಟಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 70 ರೂ.ಗಳಷ್ಟು ಏರಿಕೆಯಾಗಿದ್ದು 9,015 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 77 ರೂ. ಹೆಚ್ಚಾಗಿದ್ದು 9,835 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 57 ರೂ. ಏರಿಕೆಯಾಗಿದ್ದು 7,376 ರೂ. ರಷ್ಟಾಗಿದೆ.
ಬೆಳ್ಳಿ ದರ
ಬೆಳ್ಳಿ ದರವೂ ನಿರಂತರವಾಗಿ ಏರಿಕೆಯಾಗುತ್ತಲೇ ಇತ್ತು. ಇಂದು ಮತ್ತೆ ಬೆಳ್ಳಿ ಬೆಲೆ ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1000 ರೂ.ಗಳಷ್ಟು ಏರಿಕೆಯಾಗಿದ್ದು ಪ್ರತೀ ಕೆ.ಜಿ. ಬೆಳ್ಳಿ ಬೆಲೆ ಇಂದು 1,01,000 ರೂ.ಗಳಾಗಿವೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.