Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

Krishnaveni K

ಶನಿವಾರ, 28 ಜೂನ್ 2025 (10:25 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಲಕ್ಷದ ಗಡಿ ದಾಟಿದ್ದರಿಂದ ಚಿಂತೆಗೆ ಕಾರಣವಾಗಿದ್ದ
ಚಿನ್ನದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ ಕಂಡುಬಂದಿದೆ. ಮತ್ತೆ ಲಕ್ಷದೊಳಗೆ ಬಂದು ನಿಂತಿರುವುದು ಸಮಾಧಾನ ತಂದಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಜಾಗತಿಕ ಮಟ್ಟದಲ್ಲಿ ಯುದ್ಧದ ಸನ್ನಿವೇಶ ತಣ್ಣಗಾಗುತ್ತಿದ್ದಂತೇ ಚಿನ್ನದ ದರ ಇಳಿಕೆಯತ್ತ ಸಾಗಿತ್ತು. ನಿನ್ನೆ ಕೂಡಾ ಚಿನ್ನದ ದರದಲ್ಲಿ ಭಾರೀ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದ್ದು ಲಕ್ಷದೊಳಗೆ ಬಂದು ನಿಂತಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00, 235.00 ರೂ.ಗಳಷ್ಟಿತ್ತು. ಇಂದು ಪರಿಶುದ್ಧದ ಚಿನ್ನದ ದರ ಭಾರೀ ಇಳಿಕೆಯಾಗಿದ್ದು 98, 875.00 ರೂ. ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ.ಗಳಷ್ಟು ಇಳಿಕೆಯಾಗಿದ್ದು 09,742 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 55 ರೂ.ಗಳಷ್ಟು ಇಳಿಕೆಯಾಗಿದ್ದು 8,930 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 45 ರೂ.ಗಳಷ್ಟು ಇಳಿಕೆಯಾಗಿದ್ದು 7,307 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರದಲ್ಲೂ ಕಳೆದ ಕೆಲವು ದಿನಗಳಿಂದ ದಾಖಲೆಯ ಬೆಲೆ ಏರಿಕೆಯಾಗಿತ್ತು. ನಿನ್ನೆಯಿಂದ ಬೆಳ್ಳಿ ದರವೂ ಇಳಿಕೆಯತ್ತ ಸಾಗಿದೆ. ಇಂದು ಬೆಳ್ಳಿ ದರವೂ 100 ರೂ.ಗಳಷ್ಟು ಇಳಿಕೆಯಾಗಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,07, 800 ರೂ. ಗಳಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ