ಬೆಂಗಳೂರು: ವಾರಂತ್ಯದಲ್ಲಿ ಚಿನ್ನದ ಬೆಲೆ ಬರೋಬ್ಬರಿ ಇಳಿಕೆಯಾಗಿ ಜನರಿಗೆ ನೆಮ್ಮದಿಯಾಗಿತ್ತು. ಆದರೆ ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಲಕ್ಷದ ಗಡಿ ದಾಟಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿತ್ತು. ಇದರಿಂದಾಗಿ ಗ್ರಾಹಕರೂ ಭಾರೀ ನಿರೀಕ್ಷೆಯಲ್ಲಿದ್ದರು. ಇದೀಗ ಆಷಾಢವಾಗಿದ್ದು ಚಿನ್ನದ ದರ ಮತ್ತೆ ಏರಿಕೆಯಾಗಿ ಆತಂಕ ಮೂಡಿಸಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 98, 670.00 ರೂ.ಗಳಷ್ಟಿತ್ತು. ಆದರೆ ಇಂದು ಏಕಾಏಕಿ ಭಾರೀ ಏರಿಕೆ ಕಂಡಿದ್ದು, 1,00, 370.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 1 ರೂ.ಗಳಷ್ಟು ಏರಿಕೆಯಾಗಿದ್ದು 09,727 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 1 ರೂ.ಗಳಷ್ಟು ಏರಿಕೆಯಾಗಿದ್ದು 8,916 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 1 ರೂ.ಗಳಷ್ಟು ಏರಿಕೆಯಾಗಿದ್ದು 7,295 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರದಲ್ಲೂ ಮೊನ್ನೆಯಿಂದ ಬೆಳ್ಳಿ ದರವೂ ಇಳಿಕೆಯತ್ತ ಸಾಗಿದೆ. ಆದರೆ ಇಂದು ಬೆಳ್ಳಿ ದರವೂ ಪ್ರತೀ ಕೆ.ಜಿಗೆ 3,000 ರೂ.ಗಳಷ್ಟು ಏರಿಕೆ ಕಂಡಿದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 1,10, 000 ರೂ. ಗಳಾಗಿದೆ.