Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K

ಶನಿವಾರ, 5 ಜುಲೈ 2025 (10:35 IST)
ಬೆಂಗಳೂರು: ನಿನ್ನೆಇಳಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೆ ಲಕ್ಷದ ಗಡಿ ದಾಟಿದೆ.  ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ವಾರದ ಆರಂಭದಲ್ಲಿ ಏರಿಕೆಯಾಗಿದ್ದ ಚಿನ್ನದ ದರ ನಿನ್ನೆ ಕೊಂಚ ಮಟ್ಟಿಗೆ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಲಕ್ಷದ ಗಡಿ ದಾಟಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರದಲ್ಲಿ ಏರಿಕೆಯಾಗಿದ್ದು ಗ್ರಾಹಕರ ಚಿಂತೆಗೆ ಕಾರಣವಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 99, 775.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಇಳಿಕೆ ಕಂಡಿದ್ದು, 1,00, 065.00 ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ.ಗಳಷ್ಟು ಇಳಿಕೆಯಾಗಿದ್ದು 09,883 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ.ಗಳಷ್ಟು ಇಳಿಕೆಯಾಗಿದ್ದು 9,060 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 10 ರೂ.ಗಳಷ್ಟು ಇಳಿಕೆಯಾಗಿದ್ದು 7,415 ರೂ.ಗಳಷ್ಟಿದೆ.


ಬೆಳ್ಳಿ ದರ
ಕಳೆದ ಎರಡು ದಿನಗಳಿಂದ ಬೆಳ್ಳಿ ಬೆಲೆಯೂ ಏರಿಕೆಯಾಗುತ್ತಿತ್ತು. ಆದರೆ ಇಂದು ಬೆಳ್ಳಿ ದರವೂ ಯಥಾಸ್ಥಿತಿಯಲ್ಲಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,10, 000 ರೂ. ಗಳಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ