Gold Price: ವಾರದ ಆರಂಭದಲ್ಲೇ ಚಿನ್ನದ ದರ ಶಾಕ್ ನೀಡುವಂತಿದೆ

Krishnaveni K

ಸೋಮವಾರ, 14 ಜುಲೈ 2025 (10:57 IST)
ಬೆಂಗಳೂರು: ಕಳೆದ ವಾರ ಒಮ್ಮೆ ಏರಿಕೆ ಇನ್ನೊಮ್ಮೆ ಇಳಿಕೆಯಾಗುತ್ತಿದ್ದ ಚಿನ್ನದ ದರ ಈ ವಾರ ಆರಂಭದಲ್ಲೇ ಏರುಗತಿಯಲ್ಲಿದ್ದು ಗ್ರಾಹಕರ ಚಿಂತೆಗೆ ಕಾರಣವಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಆಷಾಢ ಮಾಸದಲ್ಲಿ ಚಿನ್ನದ ದರದಲ್ಲಿ ಯಾವುದೇ ಇಳಿಕೆ ಕಂಡುಬರುತ್ತಿಲ್ಲ.  ಕಳೆದ ವಾರಂತ್ಯಕ್ಕೆ ಚಿನ್ನದ ದರ ಕೊಂಚ ಏರಿಕೆಯಾಗಿತ್ತು. ಅದರಲ್ಲೂ ಪರಿಶುದ್ಧ ಚಿನ್ನದ ದರ ಲಕ್ಷದ ಗಡಿ ದಾಟಿತ್ತು. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,00,645.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,01,005.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 17 ರೂ.ಗಳಷ್ಟು ಏರಿಕೆಯಾಗಿದ್ದು 09,988 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 15 ರೂ.ಗಳಷ್ಟು ಏರಿಕೆಯಾಗಿದ್ದು 9,155 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 12 ರೂ.ಗಳಷ್ಟು ಏರಿಕೆಯಾಗಿದ್ದು 7,491 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ವಾರಂತ್ಯಕ್ಕೆ ದಾಖಲೆಯ ಏರಿಕೆ ಕಂಡಿತ್ತು. ಇಂದು ವಾರದ ಆರಂಭದಲ್ಲೂ ಬೆಳ್ಳಿ ದರಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 1,15, 000 ರೂ. ಗಳಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ