ಬೆಂಗಳೂರು: ಸತತ ಏರುಗತಿಯಲ್ಲಿದ್ದ ಚಿನ್ನದ ದರ ಈಗ ಕೊಂಚ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತು ಇತರೆ ಚಿನ್ನದ ದರ ಇಂದು ಕೊಂಚ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಏರುಗತಿಯಲ್ಲಿತ್ತು. ಆದರೆ ಇಂದು ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ಹಾಗಿದ್ದರೂ ಪರಿಶುದ್ಧ ಚಿನ್ನದ ದರ ಇಂದೂ ಲಕ್ಷದ ಗಡಿ ದಾಟಿಯೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮಾತ್ರ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,01,095.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಇಳಿಕೆ ಕಂಡಿದ್ದು, 1,00,675.00 ರೂ.ಗಳಾಗಿದೆ.
ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 5 ರೂ.ಗಳಷ್ಟು ಏರಿಕೆಯಾಗಿದ್ದು 09,933 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 5 ರೂ.ಗಳಷ್ಟು ಏರಿಕೆಯಾಗಿದ್ದು 9,105 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 4 ರೂ.ಗಳಷ್ಟು ಏರಿಕೆಯಾಗಿದ್ದು 7,450 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಸಾರ್ವಕಾಲಿಕ ಏರಿಕೆಯಾಗಿ ದಾಖಲೆಯ ಬೆಲೆಯಾಗಿತ್ತು. ಆದರೆ ನಿನ್ನೆ ಬೆಳ್ಳಿ ದರ ಪ್ರತೀ ಕೆ.ಜಿ.ಗೆ 5,000 ರೂ.ಗಳಷ್ಟು ಇಳಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದ್ದು 1,14, 000 ರೂ. ಗಳಷ್ಟೇ ಇದೆ.