ಬೆಂಗಳೂರು: ಈ ವಾರದ ಆರಂಭದಲ್ಲೇ ಪರಿಶುದ್ಧ ಮತ್ತು ಇತರೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದಂತೂ ಚಿನ್ನದ ದರ ಬಲು ದುಬಾರಿ ಎನ್ನುವ ಮಟ್ಟಿಗೆ ತಲುಪಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಕಳೆದ ವಾರವೇ ಲಕ್ಷದ ಗಡಿ ದಾಟಿದ್ದ ಚಿನ್ನದ ದರ ಈ ವಾರ ಮತ್ತಷ್ಟು ಏರಿಕೆಯಾಗುತ್ತಲೇ ಇದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,02,245.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,02,965.00 ರೂ.ಗಳಾಗಿದೆ.
ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 101 ರೂ.ಗಳಷ್ಟು ಏರಿಕೆಯಾಗಿದ್ದು 10,233 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 95 ರೂ.ಗಳಷ್ಟು ಏರಿಕೆಯಾಗಿದ್ದು 9,380 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 78 ರೂ.ಗಳಷ್ಟು ಏರಿಕೆಯಾಗಿದ್ದು 7,675 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಸಾರ್ವಕಾಲಿಕ ಏರಿಕೆಯಾಗಿ ದಾಖಲೆಯ ಬೆಲೆಯಾಗಿತ್ತು. ಇಂದು ಮತ್ತೆ ಬೆಳ್ಳಿ ದರ ಪ್ರತೀ ಕೆ.ಜಿ.ಗೆ 1,000 ರೂ.ಗಳಷ್ಟು ಏರಿಕೆಯಾಗಿದೆ. ಇಂದು ಮತ್ತೆ ದಾಖಲೆ ಮಾಡಿದ್ದು 1,19, 000 ರೂ. ಗಳಷ್ಟಾಗಿದೆ.