ಬೆಂಗಳೂರು: ಇಂದಿನ ಚಿನ್ನ-ಬೆಳ್ಳಿ ಧಾರಣೆಯ ಅನುಸಾರ ಪರಿಶುದ್ಧ ಚಿನ್ನದ ದರ ಮತ್ತೆ ಇಳಿಕೆಯಾಗಿದ್ದು ಸಮಾಧಾನ ಮೂಡಿಸಿದೆ. ಪರಿಶುದ್ಧ ಮತ್ತು ಇತರೆ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಚಿನ್ನದ ಬೆಲೆ ಭಾರೀ ಏರಿಕೆಯಾಗಿತ್ತು. ನಿನ್ನೆಯಂತೂ ದಾಖಲೆಯ ಏರಿಕೆ ಕಂಡಿತ್ತು. ಆದರೆ ಇಂದು ಕೊಂಚ ಇಳಿಕೆಯಾಗಿದ್ದು ಸಮಧಾನ ತರುವಂತಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,01,915.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,01,450.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 55 ರೂ.ಗಳಷ್ಟು ಇಳಿಕೆಯಾಗಿದ್ದು 09,993 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 50 ರೂ.ಗಳಷ್ಟು ಇಳಿಕೆಯಾಗಿದ್ದು 9,160 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 41 ರೂ.ಗಳಷ್ಟು ಇಳಿಕೆಯಾಗಿದ್ದು 7,495 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಸಾರ್ವಕಾಲಿಕ ಏರಿಕೆಯಾಗಿ ದಾಖಲೆಯ ಬೆಲೆಯಾಗಿತ್ತು. ಆದರೆ ಇಂದು ಬೆಳ್ಳಿ ದರವೂ ಕೊಂಚ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿ. ಬೆಳ್ಳಿ ದರ 2,000 ರೂ. ಗಳಷ್ಟು ಇಳಿಕೆಯಾಗಿದೆ. ಇಂದೂ ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,16, 000 ರೂ. ಗಳಷ್ಟಾಗಿದೆ.