ಬೆಂಗಳೂರು: ವರ ಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಯೂ ದುಬಾರಿಯಾಗಿದೆ. ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರದಲ್ಲಿ ಇಂದೂ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರವಿಡೀ ಚಿನ್ನದ ದರ ಏರಿಳಿಕೆಯಾಗುತ್ತಲೇ ಇತ್ತು. ಇಂದೂ ಪರಿಶುದ್ಧ ಚಿನ್ನ ಮತ್ತು ಇತರೆ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಅದರಲ್ಲೂ ಪರಿಶುದ್ಧ ಚಿನ್ನದ ದರವಂತೂ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,02,605.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,03,080.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 82 ರೂ. ಏರಿಕೆಯಾಗಿದ್ದು 10,222 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 75 ರೂ. ಏರಿಕೆಯಾಗಿದ್ದು 9,370 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 62 ರೂ. ಏರಿಕೆಯಾಗಿದ್ದು 7,667 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ವಾರಂತ್ಯಕ್ಕೆ ಯಥಾಸ್ಥಿತಿಯಲ್ಲಿತ್ತು. ಇಂದು ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿ.ಗೆ 2,000 ರೂ. ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,15, 000 ರೂ. ಗಳಷ್ಟಿದೆ.