ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ಇಂದು ಪರಿಶುದ್ಧ ಚಿನ್ನದ ದರ ದುಬಾರಿಯಾಗಿದ್ದ ಇತರೆ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ವಾರದ ಆರಂಭದಲ್ಲಿ ಚಿನ್ನದ ದರ ಇಳಿಕೆಯಾಗಿದ್ದು ಗ್ರಾಹಕರಿಗೆ ನೆಮ್ಮದಿ ತಂದಿತ್ತು. ಆದರೆ ಈಗ ಪರಿಶುದ್ಧಚಿನ್ನದ ದರ ಮತ್ತೆ ಏರುಗತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರದಲ್ಲಿ ಭಾರೀ ಏರಿಕೆಯಾಗಿದೆ. ಆದರೆ ಇತರೆ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿರುವುದು ಸಮಾಧಾನಕರ ಅಂಶವಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,02.365.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,03.430.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 11 ರೂ.ಗಳಷ್ಟು ಇಳಿಕೆಯಾಗಿದ್ದು 10,151 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ.ಗಳಷ್ಟು ಇಳಿಕೆಯಾಗಿದ್ದು 9,305 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 8 ರೂ.ಗಳಷ್ಟು ಇಳಿಕೆಯಾಗಿದ್ದು 7,614 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿದರವಂತೂ ಇಂದು ದಾಖಲೆಯ ಮಟ್ಟಿಕ್ಕೆ ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1000 ರೂ.ನಷ್ಟು ಏರಿಕೆಯಾಗಿದ್ದು 1,21,000 ರೂ. ಗಳಷ್ಟಿದೆ.