ಬೆಂಗಳೂರು: ಈ ವಾರದ ಆರಂಭದಲ್ಲೇ ಚಿನ್ನದ ದರ ಕೊಂಚವೇ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಆದರೆ ನಿನ್ನೆ ಚಿನ್ನದ ಬೆಲೆಯಲ್ಲಿ ಸ್ವಲ್ಪವೇ ಇಳಿಕೆ ಕಂಡುಬಂದಿದೆ. ಆದರೆ ಇದು ಒಂದೇ ದಿನದ ಸಂತೋಷ ಎನ್ನುವಂತಾಗಿದೆ. ಯಾಕೆಂದರೆ ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ1,13.200.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಇಳಿಕೆ ಕಂಡಿದ್ದು, 1,13.005.00 ರೂ.ಗಳಾಗಿದೆ.
ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.87 ರೂ.ಗಳಷ್ಟು ಏರಿಕೆಯಾಗಿದ್ದು 11,193 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 80 ರೂ.ಗಳಷ್ಟು ಏರಿಕೆಯಾಗಿದ್ದು 10,260 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 66 ರೂ.ಗಳಷ್ಟು ಏರಿಕೆಯಾಗಿದ್ದು 8,395 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬ ಸ್ಥಿತಿಯಾಗಿತ್ತು. ಆದರೆ ಇಂದು ಪ್ರತೀ ಕೆ.ಜಿಗೆ 1,000 ರೂ.ಗಳಷ್ಟು ಏರಿಕೆಯಾಗಿದ್ದು ಬೆಳ್ಳಿ ದರ 1,34,000 ರೂ. ಗಳಷ್ಟಿದೆ.