Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Krishnaveni K

ಮಂಗಳವಾರ, 30 ಸೆಪ್ಟಂಬರ್ 2025 (10:29 IST)
ಬೆಂಗಳೂರು: ವಾರದ ಆರಂಭಿಕ ದಿನವೇ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಕಳೆದ ವಾರಂತ್ಯಕ್ಕೆ ಹೋಲಿಸಿದರೆ ಈ ವಾರ ಚಿನ್ನದ ದರ ಮತ್ತಷ್ಟು ಏರಿಕೆಯಾಗುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಈ ವಾರದ ಆರಂಭದಿಂದಲೂ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಆದರೆ ವಾರದ ಅಂತ್ಯಕ್ಕೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿತ್ತು. ಇಂದಂತೂ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ1,17.465.00 ರೂ.ಗಳಷ್ಟಿತ್ತು. ಆದರೆ ಇಂದು ಭಾರೀ ಏರಿಕೆ ಕಂಡಿದ್ದು, 1,18.885.00 ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 142 ರೂ.ಗಳಷ್ಟು ಏರಿಕೆಯಾಗಿದ್ದು 11,831 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 130 ರೂ.ಗಳಷ್ಟು ಏರಿಕೆಯಾಗಿದ್ದು 10,845 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 106 ರೂ.ಗಳಷ್ಟು ಏರಿಕೆಯಾಗಿದ್ದು 8,873 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಭಾರೀ ಏರಿಕೆಯಾಗಿತ್ತು. ಇಂದಂತೂ ಬೆಳ್ಳಿ ದರ ದಾಖಲೆ ಬರೆದಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,000 ರೂ.ಗಳಷ್ಟು ಏರಿಕೆಯಾಗಿದ್ದು 1,51,000 ರೂ. ಗಳಷ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ