Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K

ಸೋಮವಾರ, 9 ಫೆಬ್ರವರಿ 2026 (11:50 IST)
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದ್ದರೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಯಥಾಸ್ಥಿತಿಯಲ್ಲಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,59,600.00 ರೂ.ಗಳಿತ್ತು. ಇಂದೂ 1,59,600.00 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಏರಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 224 ರೂ. ಏರಿಕೆಯಾಗಿ 15,884 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 205 ರೂ. ಏರಿಕೆಯಾದರೆ 14,560 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 168 ರೂ. ಏರಿಕೆಯಾದರೆ 11,913 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 15,000 ರೂ. ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 3,00,000 ರೂ. ಗಳಷ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ