Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Krishnaveni K

ಸೋಮವಾರ, 16 ಫೆಬ್ರವರಿ 2026 (11:23 IST)
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಈ ವಾರವೂ ಅದೇ ರೀತಿ ಬೆಲೆ ಏರಿಳಿಕೆಯಾಗುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಇಂದು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,61,110.00 ರೂ.ಗಳಿತ್ತು. ಇಂದೂ 1,60,405.00 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 131 ರೂ. ಇಳಿಕೆಯಾಗಿದ್ದು 15,664 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 120 ರೂ. ಇಳಿಕೆಯಾಗಿದ್ದು 14,340 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ ತಲಾ 98 ರೂ. ಇಳಿಕೆಯಾಗಿದ್ದು 11,733 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 7000 ರೂ. ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,68,000 ರೂ. ಗಳಷ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ