Gold price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Krishnaveni K

ಗುರುವಾರ, 27 ಮಾರ್ಚ್ 2025 (11:23 IST)
ಬೆಂಗಳೂರು: ಯುಗಾದಿ ಹಬ್ಬ ಹತ್ತಿರ ಬರುತ್ತಿದ್ದಂತೇ ಚಿನ್ನ ಖರೀದಿಸುವವರಿಗೆ ಕಹಿ ಸುದ್ದಿ. ಕಳೆದ ನಾಲ್ಕೈದು ದಿನಗಳಿಂದ ಚಿನ್ನದ ದರ ಕೊಂಚವೇ ಇಳಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಏರಿಕೆಯತ್ತ ಸಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಆದರೆ ಕಳೆದ ಕೆಲವು ದಿನಗಳಿಂದ ಇಳಿಕೆಯತ್ತ ಸಾಗಿತ್ತು. ಇದರಿಂದಾಗಿ ಹಬ್ಬಕ್ಕೆ ಚಿನ್ನ ಖರೀದಿಸಲು ಯೋಜನೆ ಹಾಕಿಕೊಂಡಿದ್ದವರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೆ ಚಿನ್ನದ ದರ ಏರಿಕೆಯಾಗಿದೆ.  ನಿನ್ನೆ 99.9 ಶುದ್ಧತೆಯ ಚಿನ್ನದ ಬೆಲೆ 90,450 ರೂ. ಗಳಷ್ಟಿತ್ತು. ಇಂದು ಇದು 90,640 ರೂ.ಗಳಷ್ಟಾಗಿದೆ.

22,24 ಮತ್ತು 18 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆಯಲ್ಲೂ ಸತತ ಎರಡನೇ ದಿನ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 40 ರೂ. ಏರಿಕೆಯಾಗಿದ್ದು 8,235 ರೂ. ರಷ್ಟಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 44 ರೂ. ಏರಿಕೆಯಾಗಿದ್ದು 8,984 ರೂ. ಗಳಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 33 ರೂ. ಏರಿಕೆಯಾಗಿದ್ದು ಇಂದು ಗ್ರಾಂಗೆ 6,738 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರದಲ್ಲೂ ಕೊಂಚವೇ ಇಳಿಕೆಯಾಗುತ್ತಿತ್ತು. ಆದರೆ ಇಂದು ಬೆಳ್ಳಿ ಬೆಲೆ ಸ್ಥಿರವಾಗಿದೆ. ನಿನ್ನೆ ಪ್ರತೀ ಕೆ.ಜಿ.ಗೆ 1,02,000 ರೂ.ಗಳಿಗೆ ಬಂದು ತಲುಪಿತ್ತು. ಇಂದೂ ಅದೇ ಬೆಲೆ ಮುಂದುವರಿದಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ