Gold price today: ಸೌರಮಾನ ಯುಗಾದಿ ದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Krishnaveni K

ಸೋಮವಾರ, 14 ಏಪ್ರಿಲ್ 2025 (10:36 IST)
ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ನಿನ್ನೆಯಂತೂ ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ತಲುಪಿದ್ದು ಲಕ್ಷ ತಲುಪಲು ಇನ್ನೇನು ಕೆಲವೇ ಹೆಜ್ಜೆ ಬಾಕಿ ಎನ್ನುವಂತಿತ್ತು. ಇಂದು ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದೆ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು.ನಿನ್ನೆ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಕಳೆದ ಎರಡುದಿನಗಳಿಂದಲೂ ಚಿನ್ನದ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇತ್ತು. ಆದರೆ ನಿನ್ನೆಯಂತೂ ವಿಪರೀತ ಏರಿಕೆಯಾಗಿತ್ತು. ಎಲ್ಲಾ ದಾಖಲೆಗಳನ್ನೂ ಮೀರಿ ಏರಿಕೆಯಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ಬೆಲೆ  97, 000 ರೂ.ಗೆ ಬಂದು ನಿಂತಿತ್ತು. ಇಂದೂ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 15 ರೂ. ಇಳಿಕೆಯಾಗಿ 8,755 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 16 ರೂ. ಇಳಿಕೆಯಾಗಿದ್ದು ಇಂದು 9,551 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಂಗೆ 12 ರೂ. ಗಳ್ಟು ಇಳಿಕೆಯಾಗಿದ್ದು 7,164 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ನಿರಂತರವಾಗಿ ಏರಿಕೆಯಾಗುತ್ತಲೇ ಇತ್ತು. ಆದರೆ ಈಗ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಪ್ರತೀ ಕೆ.ಜಿ. ಬೆಳ್ಳಿ ಬೆಲೆಯಲ್ಲಿ 100 ರೂ. ಇಳಿಕೆಯಾಗಿದ್ದು ಇದೀಗ 99,900 ರೂ.ಗೆ ಬಂದು ನಿಂತಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ