ಬೆಂಗಳೂರು: ಚಿನ್ನದ ಬೆಲೆ ದಿನೇ ದಿನೇ ಗಗನಕ್ಕೇರಿದ್ದು, ಇದೀಗ ವಜ್ರದ ಬೆಲೆಯಾಗಿದೆ. ಚಿನ್ನ ಕೊಳ್ಳುವುದು ಮಧ್ಯಮ ವರ್ಗದವರಿಗೆ ಗಗನಕುಸುಮವಾಗುತ್ತಿದೆ. ಯುಗಾದಿ ಹಬ್ಬ ಕಳೆದರೂ ಚಿನ್ನದ ಬೆಲೆ ಕಡಿಮೆಯಾಗುತ್ತಿಲ್ಲ. ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.
ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಯುಗಾದಿ ಹಬ್ಬಕ್ಕೆ ಮುನ್ನ ಈಗ ಬೆಲೆ ದಾಖಲೆಯ ಮಟ್ಟಕ್ಕೆ ತಲುಪಿತ್ತು. ಆದರೆ ಹಬ್ಬ ಮುಗಿದರೂ ಚಿನ್ನದ ದರ ಕಡಿಮೆಯಾಗಿಲ್ಲಇಂದೂ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದಂತೂ 92,420 ರೂ.ಗಳಷ್ಟಾಗಿದೆ. ಸದ್ಯಕ್ಕೆ ಮಧ್ಯಮ ವರ್ಗದವರಿಗೆ ಚಿನ್ನ ಗಗನ ಕುಸುಮವೇ ಸರಿ.
22,24 ಮತ್ತು 18 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆಯಲ್ಲೂ ಸತತ ಏರಿಕೆಯಾಗುತ್ತಲೇ ಇತ್ತು. ಆದರೆ ಇಂದು ಕೇವಲ 1 ರೂ.ನಷ್ಟ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 1 ರೂ. ಇಳಿಕೆಯಾಗಿದ್ದು 8,359 ರೂ. ರಷ್ಟಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 1ರೂ. ಇಳಿಕೆಯಾಗಿದ್ದು 9,119 ರೂ. ಗಳಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 1 ರೂ. ಇಳಿಕೆಯಾಗಿದ್ದು ಇಂದು ಗ್ರಾಂಗೆ 6,839 ರೂ. ರಷ್ಟಾಗಿದೆ.
ಬೆಳ್ಳಿ ದರ
ಬೆಳ್ಳಿ ದರದಲ್ಲಿ ಇಂದು ಕೊಂಚ ಮಟ್ಟಿಗೆ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿ.ಗೆ 100 ರೂಗಳಷ್ಟು ಇಳಿಕೆಯಾಗಿದ್ದು ಇಂದು 1,03,900 ರೂ.ಗಳಿಗೆ ಬಂದು ತಲುಪಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.