Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Krishnaveni K

ಶುಕ್ರವಾರ, 2 ಮೇ 2025 (10:49 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದಿದ್ದರಿಂದ ಬೆಳೆಗಾರರಲ್ಲಿ ನಿರಾಸೆ ಮೂಡಿತ್ತು. ನಿನ್ನೆ ಇದೀಗ ಮೇ 1 ಕಾರ್ಮಿಕರ ದಿನಾಚರಣೆ ಮಾರುಕಟ್ಟೆ ಬಂದ್ ಆಗಿತ್ತು. ಆದರೆ ಇಂದು ಬೆಳೆಗಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ . ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ನಾಲ್ಕೈದು ದಿನಗಳಿಂದ ಅಡಿಕೆ ಬೆಲೆ ಏರುಗತಿಯಲ್ಲಿರುವುದು ರೈತರ ಮೊಗದಲ್ಲಿ ಹರ್ಷ ತಂದಿದೆ.  ಇದು ರೈತರಿಗೆ ಹೊಸ ಭರವಸೆ ಮೂಡಿಸಿದೆ. ಹೊಸ ಅಡಿಕೆಗೆ ನಿರಂತರವಾಗಿ ಏರಿಕೆಯಾಗುತ್ತಿರುವುದು ವಿಶೇಷವಾಗಿದೆ. ಮೊನ್ನೆ ಹೊಸ ಅಡಿಕೆಗೆ 460 ರೂ.ಗಳಷ್ಟಿತ್ತು. ಇದೀಗ ಹೊಸ ಅಡಿಕೆ ಬೆಲೆ 475 ರೂ.ಗಳಷ್ಟಾಗಿದೆ. ಆದರೆ ಹಳೆ ಅಡಿಕೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ, ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.

ಆದರೆ ಪಟೋರ ದರದಲ್ಲಿ ಯಾವುದೇ ಏರಿಕೆ ಅಥವಾ ಇಳಿಕೆ ಆಗಿಲ್ಲ. ಇಂದೂ ಅದೇ ಸ್ಥಿತಿ ಮುಂದುವರಿದಿದೆ. ಹೊಸ ಫಟೋರ ದರ 350 ರೂ.ಗಳಷ್ಟಾಗಿದೆ. ಹಳೆ ಫಟೋರ ದರ 360 ರೂ. ಗಳಷ್ಟಿದೆ. ಹೊಸ ಉಳ್ಳಿ ದರ ಕೂಡಾ ಯಥಾಸ್ಥಿತಿಯಲ್ಲಿದ್ದು ಗರಿಷ್ಠ 240 ರೂ., ಹಳೆ ಉಳ್ಳಿ ದರವೂ 240 ಗಳಷ್ಟಿದೆ. ಹೊಸ ಕೋಕ ದರ 290 ರೂ., ಹಳೇ ಕೋಕ 300 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿದೆ.  ಇಂದು ಮತ್ತೆ ಕಾಳುಮೆಣಸು ದರ ಕೊಂಚ ಇಳಿಕೆಯಾಗಿದ್ದು 675 ರೂ.ಗಳಿಂದ 670 ರೂ.ಗೆ ಇಳಿಕೆಯಾಗಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಷ್ಟೇ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ