ಜಿಎಸ್‌ಟಿ ಮಸೂದೆ ಬಜೆಟ್ ಅಧಿವೇಶನದಲ್ಲಿ ಅನುಮೋದನೆ ನಿರೀಕ್ಷೆ

ಮಂಗಳವಾರ, 24 ಫೆಬ್ರವರಿ 2015 (19:34 IST)
ಸರಕು ಮತ್ತು ಸೇವಾ ತೆರಿಗೆ ಮಸೂದೆ ಮುಂಬರುವ ಬಜೆಟ್ ಅಧಿವೇಶನದಲ್ಲಿ ಅನುಮೋದನೆಯಾಗುವ ಆಶಾಭಾವನೆಯನ್ನು ಸರ್ಕಾರ ವ್ಯಕ್ತಪಡಿಸಿದೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಹೊಸ ಪರೋಕ್ಷ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲು ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸರ್ಕಾರ ಮಂಡಿಸಿತ್ತು.
 
ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಹಣಕಾಸು ಖಾತೆ ರಾಜ್ಯಸಚಿವ ಜಯಂತ್ ಸಿನ್ಹಾ ಪ್ರಸ್ತುತ ಅಧಿವೇಶನದಲ್ಲಿ ಮಸೂದೆಯನ್ನು ಪರಿಗಣಿಸಿ ಅನಮೋದನೆಗೆ ಪ್ರಸ್ತಾಪ ಮಂಡಿಸಲಿದೆ ಎಂದು ತಿಳಿಸಿದರು. ಜಿಎಸ್‌ಟಿ ಅನುಷ್ಠಾನದಿಂದ ರಾಜ್ಯಗಳಿಗೆ ಆಗುವ ನಷ್ಟವನ್ನು ಐದುವರ್ಷಗಳವರೆಗೆ ತುಂಬಿಕೊಡಲು ಕೇಂದ್ರ ಬದ್ಧವಾಗಿದೆ ಎಂದು ಸಿನ್ಹಾ ಹೇಳಿದರು.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೇಂದ್ರ ಮಾರಾಟ ತೆರಿಗೆಯನ್ನು ಶೇ. 4ರಿಂದ 2 ಕ್ಕೆ ಇಳಿಸುವುದರಿಂದ ಉಂಟಾಗುವ ನಷ್ಟವನ್ನು ತುಂಬಿಕೊಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವುದಾಗಿ ತಿಳಿಸಿದರು. ಸಿಎಸ್‌ಟಿ ಪರಿಹಾರವಾಗಿ ಸರ್ಕಾರ ಬಜೆಟ್‌ನಲ್ಲಿ 11,000 ಕೋಟಿ ರೂ.ಗಳನ್ನು ಮೀಸಲಾಗಿಟ್ಟಿದೆ.

ವೆಬ್ದುನಿಯಾವನ್ನು ಓದಿ