2030 ರ ವೇಳೆಗೆ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವೇ ಇಲ್ಲ!

ಭಾನುವಾರ, 30 ಏಪ್ರಿಲ್ 2017 (10:12 IST)
ನವದೆಹಲಿ: ಇಂಧನ ಉಳಿತಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಡಲಿದೆ. 2030 ರ ವೇಳೆಗೆ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಸಿ ಓಡುವ ಕಾರುಗಳ ಮಾರಾಟ ಇರಬಾರದು ಎಂದು ಇಂಧನ ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ.

 
ನಾವು ‘ಉಜಾಲ’ದಂತಹ ಸ್ವಯಂ ನಿರ್ಮಿತ ಇಲೆಕ್ಟ್ರಿಕ್ ಕಾರುಗಳನ್ನು ತಯಾರಿಸಬೇಕಿದೆ. ಅದಕ್ಕೆ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಿದ್ದೇವೆ. ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡುತ್ತೇವೆ.

2030 ರ ವೇಳೆಗೆ ಭಾರತದಲ್ಲಿ ಇಂಧನ ಬಳಸಿ ಓಡಿಸುವ ಕಾರುಗಳ ಮಾರಾಟವೇ ಇರಬಾರದು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ಕೈಗೆಟುಕುವ ಬೆಲೆಯಲ್ಲಿ ಜನರಿಗೆ ಇಲೆಕ್ಟ್ರಿಕ್ ಕಾರುಗಳನ್ನು ತಲುಪಿಸಬೇಕು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ