ವಿದ್ಯುತ್‌ ಚಾಲಿತ ವಾಹನಗಳ ಮೇಲಿನ ಜಿಎಸ್‌ ಟಿ ಶೇ 12ರಿಂದ ಶೇ 5ಕ್ಕೆ ಇಳಿಕೆ

ಭಾನುವಾರ, 28 ಜುಲೈ 2019 (06:40 IST)
ನವದೆಹಲಿ : ಪರಿಸರ ಸ್ನೇಹಿ ವಿದ್ಯುತ್‌ ಚಾಲಿತ ವಾಹನಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅದರ ಮೇಲಿನ ಜಿಎಸ್‌ ಟಿಯನ್ನು ಇಳಿಕೆ ಮಾಡಿದೆ.




ವಿದ್ಯುತ್‌ ಚಾಲಿತ ವಾಹನಗಳ (ಇವಿ) ತಯಾರಿಕೆ ಮತ್ತು ಅಳವಡಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಎಸ್‌ ಟಿ ಮಂಡಳಿಯು ಶೇ 12ರಷ್ಟಿದ್ದ ಜಿಎಸ್‌ ಟಿಯನ್ನು  ಶೇ 5ಕ್ಕೆ ಇಳಿಸಿದೆ. ಹಾಗೇ ಚಾರ್ಜಿಂಗ್‌ ಸ್ಟೇಷನ್‌ ಗಳ ಮೇಲಿನ ಜಿಎಸ್‌ಟಿಯನ್ನೂ ಶೇ 18 ರಿಂದ ಶೇ 5ಕ್ಕೆ ತಗ್ಗಿಸಲಾಗಿದೆ.


ವಿದ್ಯುತ್‌ ಚಾಲಿತ ವಾಹನಗಳ ಮೇಲಿನ ಪರಿಷ್ಕೃತ ತೆರಿಗೆ ದರವು ಆಗಸ್ಟ್‌ 1 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ